You are currently viewing ಕರ್ನಾಟಕ ಕೋರ್ಟನಲ್ಲಿ 150 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ 2021 | 150 Recrutment in Karnataka High Court

ಕರ್ನಾಟಕ ಕೋರ್ಟನಲ್ಲಿ 150 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ 2021 | 150 Recrutment in Karnataka High Court

ಕರ್ನಾಟಕ ಉಚ್ಚ ನ್ಯಾಯಾಲಯ ಬೆಂಗಳೂರು ಇಲ್ಲಿ ಖಾಲಿ ಇರುವ 150 ಬೆರಳಚ್ಚುಗಾರರ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಇಲಾಖೆಯು ನಿಗದಿಪಡಿಸಿರುವ ಕೊನೆಯ ದಿನಾಂಕದ ಒಳಗಾಗಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಇನ್ನು ಹೆಚ್ಚಿನ ಸರ್ಕಾರಿ ಉದ್ಯೋಗಗಳ ಮಾಹಿತಿಗಾಗಿ Topexams App Download ಮಾಡಿಕೊಳ್ಳಿ. 

ನೇಮಕಾತಿ ಇಲಾಖೆ: ಕರ್ನಾಟಕ ರಾಜ್ಯ ಉಚ್ಚ ನ್ಯಾಯಾಲಯ

ಹುದ್ದೆಯ ವಿಧಗಳು: ಫುಲ್ ಟೈಮ್

ಒಟ್ಟು ಹುದ್ದೆಗಳ ಸಂಖ್ಯೆ: 150

ವೇತನ: 25,500-81,100

ಹುದ್ದೆಯ ವಿವರ:
1. ಬೆರಳಚ್ಚುಗಾರ

ವಯೋಮಿತಿ:
ಎಲ್ಲಾ ವರ್ಗದ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದಂದು
• ಕನಿಷ್ಟ ವಯಸ್ಸು: 18 ವರ್ಷ
• OBC: 38 ವರ್ಷ ಮೀರಿರಬಾರದು.
• SC/ST/C-1 : 40 ವರ್ಷ ಮೀರಿರಬಾರದು.

ವಿದ್ಯಾರ್ಹತೆ:
(1) ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ವಿಜ್ಞಾನ/ ಕಲೆ/ ವಾಣಿಜ್ಯ/ ವ್ಯವಹಾರ ನಿರ್ವಹಣೆ (Business Management) ಕಂಪ್ಯೂಟರ್ ಅಪ್ಲಿಕೇಶನ್ ವಿಷಯಗಳ ಪದವಿಯಲ್ಲಿ, ಸಾಮಾನ್ಯ ವರ್ಗ ಮತ್ತು ಇತರೇ ಹಿಂದುಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳು ಕನಿಷ್ಠ ಶೇಕಡ 55ರಷ್ಟು ಅಂಕಗಳನ್ನು ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳು ಕನಿಷ್ಠ ಶೇಕಡ 50 ರಷ್ಟು ಅಂಕಗಳನ್ನು ಹೊಂದಿರಬೇಕು.
(2) ಆಂಗ್ಲ ಮತ್ತು ಕನ್ನಡದಲ್ಲಿ ಹಿರಿಯ ದರ್ಜೆ ಬೆರಳಚ್ಚು ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ರೊಂದಿಗೆ ಕಂಪ್ಯೂಟರ್ ನಿರ್ವಹಣಾ ಜ್ಞಾನ ಹೊಂದಿರುವುದು ಅತ್ಯವಶ್ಯಕವಾಗಿದೆ.
ವಿಶೇಷ ಸೂಚನೆ: ಕಂಪ್ಯೂಟರ್ ನಿರ್ವಹಣೆ ಜ್ಞಾನ ಎಂದರೆ ಕಂಪ್ಯೂಟರ್ ಶಿಕ್ಷಣ ನೀಡುವ ಸಂಸ್ಥೆಯ ಪ್ರಧಾನ ಮಾಡುವ ಕಂಪ್ಯೂಟರ್ ಬೇಸಿಕ್ ಕೋರ್ಸಿನ ಪ್ರಮಾಣಪತ್ರವನ್ನು ಹೊಂದಿರತಕ್ಕದ್ದು.

ಅರ್ಜಿ ಶುಲ್ಕ:
• ಸಾಮಾನ್ಯ & OBC ವರ್ಗದ ಅಭ್ಯರ್ಥಿಗಳಿಗೆ : ರೂ. 350
• SC/ST/C-1/ಅಂಗವಿಕಲ ಅಭ್ಯರ್ಥಿಗಳಿಗೆ: ರೂ. 200
• ಅರ್ಜಿ ಶುಲ್ಕವನ್ನು ಆನ್ಲೈನ್ ಅಥವಾ ಚಲನ್‌ ಮೂಲಕ ಸಂದಾಯ ಮಾಡಬಹುದು.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಕೆ ಪ್ರಾರಂಭ : 25/10/2021
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 27/11/2021
ಆನ್ಲೈನ್ ಅಥವಾ ಚಲಂ ಮೂಲಕ ಶುಲ್ಕ ಸಂದಾಯ ಮಾಡಲು ಕೊನೆಯ ದಿನಾಂಕ 30 ನವಂಬರ್ 2021

ಅರ್ಜಿ ಸಲ್ಲಿಸುವಿಕೆ: ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಕರ್ನಾಟಕ ರಾಜ್ಯ ಉಚ್ಚ ನ್ಯಾಯಾಲಯದ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಿ.

ಆಯ್ಕೆ ವಿಧಾನ:
ಬೆರಳಚ್ಚುಗಾರರ ಹುದ್ದೆಯ ಆಯ್ಕೆಯನ್ನು ಈ ಮುಂದಿನ ಪರೀಕ್ಷೆಯ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

ಅಧಿಕೃತ ನೋಟಿಪಿಕೇಷನ್‌

ಅಧಿಕೃತ ವೆಬ್‌ ಸೈಟ್‌