ಕರ್ನಾಟಕ ರಾಜ್ಯ ಮೈಸೂರು ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ,ಮಿನಿ ಅಂಗನವಾಡಿ ಕಾರ್ಯಕರ್ತೆ ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.ನಾಲ್ಕರಿಂದ 10ನೇ ತರಗತಿ ಪೂರ್ಣಗೊಳಿಸಿದ ಅಭ್ಯರ್ಥಿಗಳು ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕವಾಗಿ ಅರ್ಜಿಯನ್ನು ಸಲ್ಲಿಸಬಹುದು. ಇನ್ನು ಹೆಚ್ಚಿನ ಸರ್ಕಾರಿ ಉದ್ಯೋಗಗಳ ಮಾಹಿತಿಗಾಗಿ Topexams App Download ಮಾಡಿಕೊಳ್ಳಿ.
ನೇಮಕಾತಿ ಇಲಾಖೆ: ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಮೈಸೂರು ಅಂಗನವಾಡಿ ವಿಭಾಗ
ನೇಮಕಾತಿ ಹುದ್ದೆಗಳು
- ಕಾರ್ಯಕರ್ತೆ ಹುದ್ದೆಗಳು
- ಮಿನಿ ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳು
- ಸಹಾಯಕಿ ಹುದ್ದೆಗಳು
ಶೈಕ್ಷಣಿಕ ವಿದ್ಯಾರ್ಹತೆ:
ಸಹಾಯಕಿ ಹುದ್ದೆ: ಕನಿಷ್ಠ 4ನೇ ತರಗತಿ ತೇರ್ಗಡೆಯಾಗಿರಬೇಕು.
ಕಾರ್ಯಕರ್ತೆ ಹುದ್ದೆ: ಕನಿಷ್ಠ 10ನೇ ತರಗತಿ ತೇರ್ಗಡೆಯಾಗಿರಬೇಕು.
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಹಿಳಾ ಅಭ್ಯರ್ಥಿಗಳಾಗಿದ್ದು ಸ್ಥಳೀಯ ನಿವಾಸಿಗಳಾಗಿರಬೇಕು.
ನೇಮಕಾತಿ ಜಿಲ್ಲೆಗಳು | ಕೊನೆಯ ದಿನಾಂಕ |
ರಾಮನಗರ | 24/12/2020 |
ಮೈಸೂರು | 23 /12/2020 |
ಬೆಂಗಳೂರು ಅರ್ಬನ್ | 21/12/2020 |
ಉತ್ತರ ಕನ್ನಡ | 24/12/2020 |
ಕೋಲಾರ | 19/12/2020 |
ವಯೋಮಿತಿ:
ಕನಿಷ್ಠ 18 ವರ್ಷ
ಗರಿಷ್ಠ 35ವರ್ಷ
ಆನ್‌ಲೈನ್ ಅರ್ಜಿಯೊಂದಿಗೆ ಲಗತ್ತಿಸಬೇಕಾದ ದಾಖಲಾತಿಗಳು :
1. ಅರ್ಜಿ ನಿಗದಿತ ನಮೂನೆಯಲ್ಲಿ ( ಆನ್‌ಲೈನ್ )
2. ಜನನ ಪ್ರಮಾಣ ಪತ್ರ / ಜನ್ಮ ದಿನಾಂಕ ಇರುವ ಎಸ್.ಎಸ್.ಎಲ್.ಸಿ ಅಂಕಪಟ್ಟಿ
3. ನಿಗದಿತ ವಿದ್ಯಾರ್ಹತೆ ಅಂಕಪಟ್ಟಿ ( ಕ್ಷೇತ್ರ ಶಿಕ್ಷಣಾಧಿಕಾರಿಗಳಿಂದ ಅಂಕಪಟ್ಟಿ ನೈಜತೆ ದೃಡೀಕರಣಗೊಂಡಿರಬೇಕು )
4. ಕಡ್ಡಾಯವಾಗಿ ತಹಶೀಲ್ದಾರರು / ಉಪತಹಶೀಲ್ದಾರರಿಂದ ಪಡೆದ ಒಂದು ( 1 ) ವರ್ಷದೊಳಗಿನ ವಾಸಸ್ಥಳ ದೃಢೀಕರಣ ಪತ್ರ
ಅಭ್ಯರ್ಥಿಗಳು ಮಿಸಲಾತಿಗಳನ್ನು ಬಯಸಿದಲ್ಲಿ ಮಾತ್ರ ಈ ಕೆಳಗಿನ ದಾಖಲೆಗಳನ್ನು ಒದಗಿಸಬೇಕು.
5. ಅಭ್ಯರ್ಥಿಗಳ ಜಾತಿ ಪ್ರಮಾಣ ಪತ್ರ
6 , ಪತಿಯ ಮರಣ ಪ್ರಮಾಣ ಪತ್ರ ( ವಿಧವಾ ವೇತನ ದೃಢೀಕರಣವನ್ನು ಪರಿಗಣಿಸುವುದಿಲ್ಲ . )
7. ಆತ್ಮಹತ್ಯೆ ಮಾಡಿಕೊಂಡ ರೈತರ ಪತ್ನಿ ಎಂದು ಉಪವಿಭಾಗಾಧಿಕಾರಿಗಳಿಂದ ಪಡೆದ ಪ್ರಮಾಣ ಪತ್ರ
8 , ಅಂಗವಿಕಲತೆ ಪ್ರಮಾಣ ಪತ್ರ ( ಜಿಲ್ಲಾ ವೈದ್ಯಕೀಯ ಮಂಡಳಿಯಿಂದ ಪಡೆದಿರಬೇಕು )
9. ವಿಚ್ಚೇದನಾ ಪ್ರಮಾಣ ಪತ್ರ ( ನ್ಯಾಯಾಲಯದಿಂದ ಪಡೆದಿರಬೇಕು )
10. ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ ನಡೆಸಲ್ಪಟ್ಟ ಮಾಜಿ ದೇವದಾಸಿಯರ ಸಮೀಕ್ಷೆಯ ಪಟ್ಟಿಯಲ್ಲಿರುವ ಮಾಜಿ ದೇವದಾಸಿಯರ ಮಕ್ಕಳು ಎಂಬುದರ ಬಗ್ಗೆ ಮಹಿಳಾ ಅಭಿವೃದ್ಧಿ ನಿಗಮದ ಅಧಿಕಾರಿಗಳಿಂದ ಪ್ರಮಾಣ ಪತ್ರ
11 , ಪರಿತ್ಯಕ್ತ ಎಂಬ ಬಗ್ಗೆ ಗ್ರಾಮ ಪಂಚಾಯತ್‌ನಿಂದ ಪಡೆದ ಪ್ರಮಾಣ ಪತ್ರ
12. ಇಲಾಖೆಯ ಸುಧಾರಣಾ ಸಂಸ್ಥೆ / ರಾಜ್ಯ ಮಹಿಳಾ ನಿಲಯಗಳ ನಿವಾಸಿ ಎಂಬ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳಿಂದ ಪಡೆದ ಪ್ರಮಾಣ ಪತ್ರ
13. ಯೋಜನಾ ನಿರಾಶ್ರಿತರೆಂಬ ಬಗ್ಗೆ ತಹಶೀಲ್ದಾರರಿಂದ ಪಡೆದ ಪ್ರಮಾಣ ಪತ್ರ
ಇಲಾಖೆಯ ಅಧಿಕೃತ ವೆಬ್ ಸೈಟ್