You are currently viewing 1242 ಸಹಾಯಕ ಪ್ರಾಧ್ಯಾಪಕರ ಬೃಹತ್ ನೇಮಕಾತಿ ಅರ್ಜಿ ಆಹ್ವಾನ 2021 | Apply Now

1242 ಸಹಾಯಕ ಪ್ರಾಧ್ಯಾಪಕರ ಬೃಹತ್ ನೇಮಕಾತಿ ಅರ್ಜಿ ಆಹ್ವಾನ 2021 | Apply Now

ಕರ್ನಾಟಕ ರಾಜ್ಯ ಪರೀಕ್ಷಾ ಪ್ರಾಧಿಕಾರದಿಂದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ 1242 ಸಹಾಯಕ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಪ್ರಾಧ್ಯಾಪಕರ (1242 assistant professor recruitment in karnataka 2021) ಹುದ್ದೆಗಳ ನೇಮಕಾತಿಗಾಗಿ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಪ್ರಾಧಿಕಾರ ನಿಗದಿಪಡಿಸಿರುವ ಕೊನೆಯ ದಿನಾಂಕ 06-11-2021 ರ ಒಳಗಾಗಿ ನಿಗದಿಪಡಿಸಿರುವ ಸೂಕ್ತ ದಾಖಲೆಗಳೊಂದಿಗೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿ ಯನ್ನು ಈ ಕೆಳಕಂಡ ವಿಷಯಗಳಿಗೆ ಸಂಬಂಧಿಸಿದಂತೆ ನಡೆಸಲಾಗುತ್ತಿದೆ: ಕನ್ನಡ ಇಂಗ್ಲಿಷ್ ಹಿಂದಿ ಉರ್ದು ಇತಿಹಾಸ, ಅರ್ಥಶಾಸ್ತ್ರ, ರಾಜ್ಯಶಾಸ್ತ್ರ, ಶಿಕ್ಷಣಶಾಸ್ತ್ರ, ಕಾನೂನು, ಸಮಾಜಶಾಸ್ತ್ರ, ಭೂಗೋಳಶಾಸ್ತ್ರ, ಭೂಗರ್ಭಶಾಸ್ತ್ರ, ವಾಣಿಜ್ಯಶಾಸ್ತ್ರ, ನಿರ್ವಹಣಾಶಾಸ್ತ್ರ, ಭೌತಶಾಸ್ತ್ರ, ರಾಸಾಯನಶಾಸ್ತ್ರ, ಜೈವಿಕ ರಸಾಯನಶಾಸ್ತ್ರ, ಗಣಿತಶಾಸ್ತ್ರ, ಸೂಕ್ಷ್ಮಜೀವಶಾಸ್ತ್ರ, ಪ್ರಾಣಿಶಾಸ್ತ್ರ, ಸಸ್ಯಶಾಸ್ತ್ರ ಎಲೆಕ್ಟ್ರಾನಿಕ್ಸ್, ಗಣಕ ವಿಜ್ಞಾನ, ಸಂಖ್ಯಾಶಾಸ್ತ್ರ ಮತ್ತು ಫ್ಯಾಷನ್ ಟೆಕ್ನಾಲಜಿ

ಒಟ್ಟು ಹುದ್ದೆಗಳು: 1242
ಉದ್ಯೋಗ ಸ್ಥಳ : ಕರ್ನಾಟಕ

ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಸ್ನಾತಕೋತ್ತರ ಪದವಿ/ NET/ KSET/ Ph.D ಪೂರ್ಣಗೊಳಿಸಿರಬೇಕು.

ವಯೋಮಿತಿ:
ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ 40 ವರ್ಷಗಳು.
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 43 ವರ್ಷಗಳು.
ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಪ್ರವರ್ಗ-1 ರ ಅಭ್ಯರ್ಥಿಗಳಿಗೆ 45 ವರ್ಷಗಳು

ವೇತನ ಶ್ರೇಣಿ:
ಯುಜಿಸಿ ವೇತನ ಶ್ರೇಣಿ 57700/- ರಿಂದ 182400/-
ಪ್ರಕಟಣೆ: 01-10-2021 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 6 ನವೆಂಬರ್ 2021

ಅರ್ಜಿ ಶುಲ್ಕ:
1. ಸಾಮಾನ್ಯ ಅರ್ಹತೆ ಮತ್ತು ಇತರೆ ಪ್ರವರ್ಗಗಳ (ಪ್ರವರ್ಗ-2ಎ / 2ಬಿ, 3ಎ / 3ಬಿ) ರ ಅಭ್ಯರ್ಥಿಗಳಿಗೆ 2000/-
2. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1 ರ ಅಭ್ಯರ್ಥಿಗಳಿಗೆ 1000/-
3. ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯ್ತಿ ಇದೆ. ( ಶೇ 40 ಕ್ಕಿಂತ ಹೆಚ್ಚು ಅಂಗವಿಕಲತೆ ಹೊಂದಿರುವವರು ಮತ್ತು ಅದಕ್ಕೆ ಸಂಬಂಧಿಸಿದಂತೆ ಜಿಲ್ಲಾ ವೈದ್ಯಾಧಿಕಾರಿಗಳಿಂದ ಪ್ರಮಾಣ ಪತ್ರ ಹೊಂದಿರುವವರು)

ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುವುದು.

ಪರೀಕ್ಷಾ ಕೇಂದ್ರಗಳು:
ಸ್ಪರ್ಧಾತ್ಮಕ ಪರೀಕ್ಷೆಯನ್ನು ಬೆಂಗಳೂರು, ಮೈಸೂರು, ಶಿವಮೊಗ್ಗ, ಧಾರವಾಡ, ಬೆಳಗಾವಿ, ಕಲಬುರಗಿ, ಮತ್ತು ಮಂಗಳೂರು, ಸ್ಥಳಗಳಲ್ಲಿ ನಡೆಸಲಾಗುವುದು.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 7 ಅಕ್ಟೋಬರ್ 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 6 ನವೆಂಬರ್ 2021